ಸುದ್ದಿ

ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

40

ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು.

2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ ಬಿಡುಗಡೆ ಮಾಡಿಸಿದ್ದರು. ಪರಿಣಾಮ ದೇವಾಲಯಕ್ಕೆ ವಿಶೇಷವಾದ ಮೇಲ್ಛಾವಣಿ, ನೆಲಹಾಸು ಮತ್ತು ವಿದ್ಯುತ್ ಸೌಕರ್ಯ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಯಿತು. ಅಂದಿನಿಂದ ಇಲ್ಲಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಇಲ್ಲಿ ಪ್ರತಿ ಸೋಮವಾರ ಅರ್ಚನೆ ಮಾಡಲಾಗುತ್ತದೆ.

ಗಿಡಗಂಟೆಗಳು ಬೆಳೆದು ಕಾಡಿನಂತಿದ್ದ ದೇವಾಲಯದ ಆವರಣದಲ್ಲಿ ವಿಶೇಷವಾದ ಮರಗಳಿದ್ದು ಅವುಗಳೊಂದಿಗೆ ರೋಹಿಣಿ ಸಿಂಧೂರಿ ಹೆಸರಿನಲ್ಲಿಯೂ ಸಹ ಒಂದು ಗಿಡವನ್ನು ನೆಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದಲೇ ಈ ಗಿಡವನ್ನು ತಂದು ದೇವಾಲಯದ ಆವರಣದಲ್ಲಿ ನೆಟ್ಟು ಪೋಷಣೆ ಮಾಡಲಾಗುತ್ತಿದೆ.

ಗಿಡಕ್ಕೆ ಪ್ರತಿದಿನ ದೇವಾಲಯದ ಪೂಜೆಯ ಅಭಿಷೇಕದ ನೀರನ್ನು ಹಾಕುತ್ತಾರೆ. ಪ್ರತಿ ಸೋಮವಾರ ಗಿಡಕ್ಕು ಸಹ ಅಭಿಷೇಕ ಮಾಡಲಾಗುತ್ತದೆ. ದೇವಾಲಯಕ್ಕೆ ತಮ್ಮ ತಾಯಿಯೊಂದಿಗೆ ಭೇಟಿ ನೀಡಿದ ಸಿಂಧೂರಿ ಅಂದು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಮಾಡಿದ ಒಂದು ಕೆಲಸ ಅವರನ್ನು ನೆನಪಿಸಿಕೊಳ್ಳುವಂತೆ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸರ್ಕಾರಿ ಯೋಜನೆಗಳು

    ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಇಂದಿರಾ ಸಾರಿಗೆ ನಂತರ ಈಗ ಪಿಂಕ್ ಆಟೋಗಳು..!ತಿಳಿಯಲು ಈ ಲೇಖನ ಓದಿ..

    ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…