ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

85

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.