ಉಪಯುಕ್ತ ಮಾಹಿತಿ

ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

41

ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ…

ಬೇಕಾಗುವ ಸಾಮಗ್ರಿಗಳು:
1. ಹೆಸರುಬೇಳೆ 1 ಕಪ್
2. ಅಕ್ಕಿ 1 ಕಪ್
3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್
4. ಏಲಕ್ಕಿ – 4
5. ದ್ರಾಕ್ಷಿ , ಗೋಡಂಬಿ 50 ಗ್ರಾಂ
6. ತುಪ್ಪ 4 ಚಮಚ

ಮಾಡುವ ವಿಧಾನ
ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.
ಕುಕ್ಕರ್ ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.
ಮತ್ತೊಂದು ಪ್ಯಾನ್ ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ.(ಒಂದು ವೇಳೆ ಬೆಲ್ಲದಲ್ಲಿ ಕಲ್ಮಶವಿದ್ದರೆ ಒಮ್ಮೆ ಶೋಧಿಸಿಕೊಳ್ಳಿ)
ಈಗ ಬೆಂದ ಅಕ್ಕಿ ಮತ್ತು ಬೇಳೆಗೆ ಬೆಲ್ಲದ ಪಾಕ ಹಾಕಿ ಚೆನ್ನಾಗಿ ತಿರುವಿ.
ನಂತರ ಪುಡಿ ಮಾಡಿದ ಏಲಕ್ಕಿ, ತುಪ್ಪದಲ್ಲಿ ಕರಿದ ದ್ರಾಕ್ಷಿ ಗೋಡಂಬಿ ಹಾಕಿ ಒಲೆಯಿಂದ ಇಳಿಸಿ.

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     743,831 total views,  30 views today

ಏನ್ ಸಮಾಚಾರ