ಸುದ್ದಿ

ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

127

ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್‍ಗಳು ಹರಸಾಹಸ ಪಡುತ್ತಿದ್ದಾರೆ.

ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…