ದೇಗುಲ ದರ್ಶನ, ದೇವರು, ದೇವರು-ಧರ್ಮ

ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

58

ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ ಪೀಠದ ಮೇಲೆ ಬೆಳ್ಳಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.

ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗದ್ದುಗೆ ಪೀಠವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗ ಈಗಾಗಲೇ ಪ್ರತಿಷ್ಠಾಪನೆ ಮಾಡಲಾಗಿತ್ತು. ಶಿವಲಿಂಗದ ಹಿಂಭಾಗದ ಮೇಲ್ಭಾಗದಲ್ಲಿ ಶ್ರೀಗಳ ಭಾವಚಿತ್ರ ಇರಿಸಲಾಗಿತ್ತು. ಈ ಭಾವ ಚಿತ್ರ ತೆರವುಗೊಳಿಸಿ ಅದರ ಜಾಗದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

ಗದ್ದುಗೆ ಪೀಠದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದ್ದಂತೆ ಸಾಕ್ಷಾತ್ ಶಿವಕುಮಾರ ಶ್ರೀಗಳೇ ಬಂದು ಕುಂತ ಅನುಭವ ಭಕ್ತಾಧಿಗಳಲ್ಲಿ ಕಂಡಿದೆ. ಇಂದು ಶ್ರೀಗಳು ಲಿಂಗೈಕ್ಯರಾಗಿ 1 ವರ್ಷವಾಗಿದೆ. ಹಾಗಾಗಿ ಶ್ರೀಮಠದ ಭಕ್ತರಾದ ದೆಹಲಿ ಮೂಲದ ಉದ್ಯಮಿ ಮುಕೇಶ್ ಗರ್ಗ್ ಭಕ್ತಿಪೂರ್ವಕವಾಗಿ ಸಮರ್ಪಿಸಿದ ಬೆಳ್ಳಿ ವಿಗ್ರಹ ಇದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…