ಸುದ್ದಿ

ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

159

ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ.

ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ ಸಿನಿಮಾ ಅವಕಾಶಗಳು ಕಡಿಮೆಯಾಯಿತು. ಇದಕ್ಕೆ ಖಂಡಿತ ವಿಷಾದವಿಲ್ಲ.

ಘಟನೆಯಿಂದಾಗಿ ಇಲ್ಲಿಯವರೆಗೂ ಯಾವುದೇ ಸಿನಿಮಾ ಅವಕಾಶ ಬಂದಿಲ್ಲ. ಇದರ ಬಗ್ಗೆ ನನಗೆ ಚಿಂತೆ ಇಲ್ಲ. ಈ ಒಂದು ವರ್ಷದಲ್ಲಿ ಕುಟುಂಬದ ಜೊತೆಗೆ ಕಾಲಕಳೆಯಲು ಅವಕಾಶ ಸಿಕ್ಕಿತು. ಮಗಳು ಹಾಗೂ ಪತಿಯ ಜೊತೆಗೆ ಸಂತೋಷವಾಗಿದ್ದೇನೆ ಎಂದರು. ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿಕೊಟ್ಟಿದೆ. ಪ್ರಶಸ್ತಿ ಬಂದಿರುವುದಕ್ಕೆ ಮತ್ತೆ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹೊಂದಿದ್ದೇನೆ.

ಮೀಟೂ ನಂತಹ ಪ್ರಕರಣಗಳಲ್ಲಿ ಸಾಕ್ಷಿ ಇರುವುದಿಲ್ಲ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಧೈರ್ಯದಿಂದ ಹೋರಾಡಬೇಕು ಎಂದು ತಿಳಿಸಿದರು. ಇದೇಕಾರ್ಯಕ್ರದಲ್ಲಿ ಮಾತನಾಡಿದ ಶ್ರುತಿ ಹರಿಹರನ್ ತಾಯಿ, ನಿಮಗೆ ಮೀಟೂ ಅನುಭವ ಆದರೆ ಸುಮ್ಮನೆ ಇರಬೇಡಿ. ಸುಂದರ ಚಪ್ಪಲಿ ಕೈಗೆ ಎತ್ತಿಕೊಳ್ಳಿ ಎಂದು ಸಂವಾದದಲ್ಲಿ ಸೇರಿದ್ದ ಮಹಿಳೆಯರಿಗೆ ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…