ಸುದ್ದಿ

ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

24

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು ಪ್ರತಿಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ‘ರಾಜೀನಾಮೆ ನೀಡಿರುವ 10 ಶಾಸಕರು ಸಭೆಗೆ ಬಂದಿಲ್ಲ. ಉಳಿದ ಶಾಸಕರು ಸಭೆಗೆ ಬಂದು ಪಕ್ಷ ನಿಷ್ಠೆ ತೋರಿಸಿದ್ದಾರೆ’ ಎಂದು ಹೇಳಿದರು. ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿವರವಾದ ಚರ್ಚೆಯನ್ನು ನಡೆಸಿದ್ದೇವೆ. ಸಭೆಯಲ್ಲಿ ಪಾಲ್ಗೊಂಡ ಶಾಸಕರೆಲ್ಲ ಪಕ್ಷನಿಷ್ಠೆಯನ್ನು ತೋರಿಸಿದ್ದಾರೆ.ಜುಲೈ 12ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ ನಮ್ಮ ನಿಲುವು ಏನಾಗಿರಬೇಕು ಎಂದು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ.

ಬಿಜೆಪಿ ಕರ್ನಾಟಕದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನವನ್ನು ನಡೆಸುತ್ತಿದೆ. ಶಾಸಕರಿಗೆ ಹಣ, ಸ್ಥಾನಮಾನದ ಆಮಿಷವೊಡ್ಡಲಾಗಿದೆ. ಇಷ್ಟೊಂದು ಹಣ ಪಕ್ಷಕ್ಕೆ ಎಲ್ಲಿಂದ ಬಂತು ಎಂದು ನಾನು ಪ್ರಶ್ನೆ ಮಾಡುತ್ತೇನೆ.
ಆಪರೇಷನ್ ಕಮಲದ ರೂವಾರಿಗಳು ನರೇಂದ್ರ ಮೋದಿ ಮತ್ತು ಅಮಿತ್ ಶಾ. ಅವರ ಸೂಚನೆಯಂತೆ ಇಲ್ಲಿನ ನಾಯಕರು ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ.ರಾಜೀನಾಮೆ ನೀಡಿರುವ ಶಾಸಕರಿಗೆ ವಾಪಸ್ ಬಂದು, ರಾಜೀನಾಮೆ ವಾಪಸ್ ಪಡೆಯಿರಿ ಎಂದು ಮನವಿ ಮಾಡುತ್ತೇನೆ.

ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಮಾಡಲು ಪಕ್ಷ ತೀರ್ಮಾನವನ್ನು ಕೈಗೊಂಡಿದೆ. ಪ್ರಜಾಪ್ರತಿನಿಧಿ ಕಾಯ್ದೆ 164-1ಬಿ ಅನ್ವಯ ಎಲ್ಲಾ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ನಾವು ಮನವಿ ಮಾಡಲಿದ್ದೇವೆ. ಅದಕ್ಕೂ ಮೊದಲು ಶಾಸಕರು ವಾಪಸ್ ಬಂದು ರಾಜೀನಾಮೆ ವಾಪಸ್ ಪಡೆಯಲಿ ಎಂದು ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಎಲ್ಲಾ ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆ ಖಂಡಿಸಿ ಒಂದು ಗಂಟೆ ಧರಣಿ ಮಾಡುತ್ತೇವೆ. ಬಳಿಕ ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ದೂರು ನೀಡುತ್ತೇವೆ.

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     728,409 total views,  1,106 views today

ಏನ್ ಸಮಾಚಾರ