ಸುದ್ದಿ

5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

85

ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ