ಸುದ್ದಿ

ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

24

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.


ಪುಲ್ವಾಮಾ ಜಿಲ್ಲೆಯ ಡೆಲಿಪೊರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಬೆಳಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿ ಗುಂಡಿನ ದಾಳಿ ನಡೆಸಿದ್ದಾರೆ.ಕಾರ್ಯಾಚರಣೆ ವೇಳೆ ಸೆಪೊಯ್ ಸಂದೀಪ್ ಎಂಬ ಯೋಧ ಹುತಾತ್ಮನಾಗಿದ್ದು, ರಾಯೇಸ್ ಡಾರ್ ಎಂಬ ಸ್ಥಳೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.


ಶೂಪಿಯಾನ್ ನಲ್ಲಿ ಶೋಧ ಕಾರ್ಯಾಚರವಣೆ ವೇಳೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆಯಲ್ಲಿ ಸೆಪೊಯ್ ರೊಹಿತ್ ಎಂಬ ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….