ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಡೆಲಿಪೊರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಬೆಳಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿ ಗುಂಡಿನ ದಾಳಿ ನಡೆಸಿದ್ದಾರೆ.ಕಾರ್ಯಾಚರಣೆ ವೇಳೆ ಸೆಪೊಯ್ ಸಂದೀಪ್ ಎಂಬ ಯೋಧ ಹುತಾತ್ಮನಾಗಿದ್ದು, ರಾಯೇಸ್ ಡಾರ್ ಎಂಬ ಸ್ಥಳೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
ಶೂಪಿಯಾನ್ ನಲ್ಲಿ ಶೋಧ ಕಾರ್ಯಾಚರವಣೆ ವೇಳೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆಯಲ್ಲಿ ಸೆಪೊಯ್ ರೊಹಿತ್ ಎಂಬ ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…