ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.

ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ.

ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು. ಈ ವೇಳೆ ಮನೆ ಮಾಲೀಕ ಸೋಮಶೇಖರ್, ಗೀತಾ ಮತ್ತು ಬಿಂದು ಪೊಲೀಸರ ಮುಂದೆಯೇ ಮಂಜುಳಾ ಮತ್ತು ಪತಿ ಸುಬ್ರಮಣಿಗೆ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ಮಂಜುಳಾ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಡಿಯೋದಲ್ಲಿ ಏನಿದೆ? , ದೂರು ಕೊಡಲು ಪೊಲೀಸ್ ಠಾಣೆಗೆ ಹೋದಾಗ ನನ್ನ ಮಾಂಗಲ್ಯವನ್ನು ಕಿತ್ತುಕೊಂಡು ತುಂಬಾನೇ ಹಿಂಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಸೋಮಶೇಖರ್, ಗೀತಾ ಮತ್ತು ಬಿಂದು ಮೂವರೂ ನನಗೆ ಮತ್ತು ಪತಿಗೆ ಚೆನ್ನಾಗಿ ಹೊಡೆದಿದ್ದಾರೆ. ಆದರೆ ಪೊಲೀಸರು ಯಾಕೆ ಹೊಡೆಯುತ್ತಿದ್ದೀರಿ ಎಂದು ಕೂಡ ಕೇಳಿಲ್ಲ. ನಾನು ಪತಿಯನ್ನು ಆಸ್ಪತ್ರೆಗೆ ಕಳುಹಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಈ ಮೂವರು ಕಾರಣರಾಗಿದ್ದು ಅವರನ್ನು ಬಿಡಬೇಡಿ. ಬಡವರಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.