ಸುದ್ದಿ

ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

91

ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಪ್ರದೀಪ್ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೃತ್ಯ ನಡೆದ ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದ್ದು, ತನ್ನ ಹೆಂಡತಿ ತನ್ನನ್ನು ಅನುಮಾನಿಸಿದ್ದಕ್ಕೆ ಈ ರೀತಿ ಮಾಡಿದ್ದೇನೆ ಎಂದು ಬರೆಯಲಾಗಿದೆ. ಇನ್ನೂ ಕೊಲ್ಲುವಾಗ ಮಕ್ಕಳು ಕಿರುಚಬಾರದು ಎಂದು ಮಕ್ಕಳ ಬಾಯಿಗೆ ಟೇಪ್ ಹಾಕಿ ಕೊಲೆ ಮಾಡಿದ್ದಾನೆ ಎಂದು ಘಜಿಯಾಬಾದ್‍ನ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ಎಲ್ಲಾ ಮೃತ ದೇಹಗಳು ಮನೆಯಲ್ಲಿ ಇದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಈ ಘಟನೆ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…