ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…