ಸಿನಿಮಾ

CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

300

ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

“ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ ತನ್ನ 12ನೇ ತರಗತಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಅಂಕ ಪಡೆದುಕೊಂಡಿದ್ದಾಳೆ.

ಈ ಮೂಲಕ ಅವಳು ಶಾಲೆಗೆ ಎರಡನೇ ಟಾಪರ್ ಆಗಿದ್ದಾಳೆ. ನಿಮ್ಮ ಪ್ರೀತಿ, ಆಶೀರ್ವಾದ ಸದಾ ಹೀಗೆ ಇರಲಿ, ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಜೊತೆಗೆ ಸುಧಾರಾಣಿ ಮತ್ತು ಪತಿ ಗೋವರ್ಧನ್ ಇಬ್ಬರೂ ನಿಧಿಯನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತು ಕೊಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಮಗಳು ಶಾಲೆ ಮುಗಿಸಿದ ನಂತರ ಕುಟುಂಬವೂ ವಿದೇಶಿ ಪ್ರವಾಸ ತೆರಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…