ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು ಕೇಂದ್ರ ಸಚಿವ ಸ್ಥಾನವೂ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಸಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇನೆ. ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿರುವ ವಿಡಿಯೋ ನನ್ನ ಬಳಿಯಿದೆ. ಶೀಘ್ರದಲ್ಲಿಯೇ ಅದನ್ನು ಬಿಡುಗಡೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸುಮಲತಾರನ್ನು ಬೆಂಬಲಿಸಿ ಎಂದು ಹೇಳಿದ್ದರು. ಈ ಹೇಳಿಕೆ ಬಳಿಕವೂ ಸುಮಲತಾ ಅವರು ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಹರಿದಾಡಿದ್ದವು.
ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಬಂಡಾಯ ಕಾಂಗ್ರೆಸ್ ನಾಯಕರು ಸುಮಲತಾ ಪರ ಕೆಲಸ ಮಾಡುತ್ತಲೇ ಇದ್ದಾರೆ. ಇದರಿಂದ ಬೇಸತ್ತ ದಿನೇಶ್ ಗುಂಡೂರಾವ್ ಅವರೇ ಖುದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಸುಮಲತಾ ಅಂಬರೀಶ್ ಗೆದ್ದ ಮೇಲೆ ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಹಿಂದೆಯೇ ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ. ಗೆದ್ದರೆ ನನ್ನ ಕ್ಷೇತ್ರದ ಜನ ಯಾವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳುತ್ತಾರೆಯೋ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ