ಹಿರಿಯ ನಟಿ ಜಮುನಾ ನಿಧನ
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….