ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.

12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು.

ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.

ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.