ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.
12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು.
ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.
ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…