ಆರೋಗ್ಯ, ಉಪಯುಕ್ತ ಮಾಹಿತಿ

ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

368

ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ.

ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. 

ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ ಸಮಯದಲ್ಲಿ ಮೊದಲು ನೀರು ಕುಡಿದು ನಂತರ ಕಾಫಿ ಟೀ ಸೇವಿಸಿದರೆ ಸಮಸ್ಯೆಯಾಗದು.

ಹೊಟ್ಟೆ ಹುಣ್ಣು:-ಕೆಲವರಿಗೆ ಕಾಫಿ-ಟೀ ಸೇವನೆ ಹೊಟ್ಟೆ ಹುಣ್ಣಿನಂತಹ ಸಮಸ್ಯೆ ತರುತ್ತದೆ. ಇಂತಹವರು ಮೊದಲು ನೀರು ಕುಡಿದು ನಂತರ ಕಾಫಿ-ಟೀ ಸೇವಿಸಬಹುದು.

ಅಡ್ಡ ಪರಿಣಾಮ ಕಡಿಮೆ:-ಕಾಫಿ-ಟೀ ಸೇವನೆ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ. ಹಾಗಿದ್ದರೂ ನಮಗೆ ಚಟವಾಗಿಬಿಟ್ಟಿರುತ್ತದೆ. ಇಂತಹ ಸಂದರ್ಭದಲ್ಲಿ ಮೊದಲು ನೀರು ಕುಡಿದು ನಂತರ ಪಾನೀಯ ಸೇವಿಸುವುದರಿಂದ ಅಡ್ಡ ಪರಿಣಾಮಗಳು ಕೊಂಚ ಕಡಿಮೆಯಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ