News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..
ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ
ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ
ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್
ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ
ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?
ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು
ಉಬ್ಬಸ ಸಮಸ್ಯೆಗೆ ಮನೆ ಮದ್ದು
ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್
ಮಂಗಳ ಗ್ರಹ
ವಿಸ್ಮಯ ಜಗತ್ತು

30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

438

ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ.

ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ, ಅವರ ಆರೋಗ್ಯ ಕೂಡ ಚೆನ್ನಾಗಿಯೇ ಇದೆ.

ಛತ್ತೀಸ್‍ಗಢದ ಕೊರಿಯಾ ಜಿಲ್ಲೆಯ ಬರಾದಿಯಾ ಗ್ರಾಮದ ನಿವಾಸಿ ಪಿಲ್ಲಿ ದೇವಿ(44) ಕಳೆದ 30 ವರ್ಷಗಳಿಂದ ಕೇವಲ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ. ಪಿಲ್ಲಿ ದೇವಿ, 11 ವರ್ಷ ವಯಸ್ಸಿದ್ದಾಗ ಆಹಾರ ತ್ಯಜಿಸಿದ ಆಕೆ, ಅಂದಿನಿಂದ ಟೀ ಕುಡಿದೇ ಬದುಕುತ್ತಿದ್ದಾಳೆ, ಇಡೀ ಗ್ರಾಮದಲ್ಲಿ ಪಿಲ್ಲಿ ದೇವಿ ಚಾಯ್ ವಾಲಿ ಚಾಚಿ ಎಂದೇ ಪ್ರಸಿದ್ದಳಾಗಿದ್ದಾಳೆ.

ಆಕೆ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಪಾಟ್ನಾ ಶಾಲೆಯ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಹೋಗಿದ್ದಳು. ಆ ದಿನ ಮನೆಗೆ ವಾಪಸ್ ಬಂದಾಗಿನಿಂದ ಯಾವುದೇ ಆಹಾರ ಸೇವಿಸದಿರಲು ನಿರ್ಧರಿಸಿದಳು,ಅಂದಿನಿಂದ ಆಕೆ ಏನನ್ನೂ ಸೇವಿಸುತ್ತಿಲ್ಲ ಎಂದು ಆಕೆಯ ತಂದೆ ರತಿ ರಾಮ್ ಹೇಳಿದ್ದಾರೆ.

ತಮ್ಮ ಮಗಳು ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಒಂದು ದಿನ ಪಾಟ್ನಾ ಶಾಲೆಯ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಹೋಗಿದ್ದಳು. ಆ ದಿನ ಮನೆಗೆ ವಾಪಸ್ ಬಂದಾಗಿನಿಂದ ಆಕೆ ನೀರು ಮತ್ತು ಆಹಾರವನ್ನು ತಿನ್ನುವುದನ್ನು ಬಿಟ್ಟಳು. ಮೊದಲಿಗೆ ಟೀ ಜೊತೆ ಬಿಸ್ಕಟ್ ಮತ್ತು ಬ್ರೆಡ್ ತಿನ್ನುತ್ತಿದ್ದಳು, ಆದ್ರೆ ಕೆಲ ತಿಂಗಳ ನಂತರ ಬಿಸ್ಕಟ್ ಮತ್ತು ಬ್ರೆಡ್ ತಿನ್ನೋದನ್ನು ಬಿಟ್ಟಳು ಎಂದು ಮಹಿಳೆಯ ತಂದೆ ರತಿ ರಾಮ್ ಹೇಳಿದ್ದಾರೆ.

ಮೊದಲಿಗೆ ತಮ್ಮ ಮಗಳು ಟೀ ಜೊತೆ ಬಿಸ್ಕಿಟ್ಸ್ ಮತ್ತು ಬ್ರೆಡ್ ತಿನ್ನುತ್ತಿದ್ದಳು, ಕೆಲ ತಿಂಗಳ ನಂತರ ಅದನ್ನು ತಿನ್ನುವುದನ್ನು ಬಿಟ್ಟಳು, ನಂತರ ಆಕೆ ಯಾವುದಾದರೂ ರೋಗದಿಂದ ಬಳಲುತ್ತಿದ್ದಾಳೆಯೇ ಎಂಬ ಬಗ್ಗೆ ವೈದ್ಯರ ಬಳಿ ಪರೀಕ್ಷಿಸಿದೆವು, ಆದರೆ ಆಕೆಗೆ ಯಾವುದೇ ಕಾಯಿಲೆ ಇಲ್ಲ ಎಂದು ವೈದ್ಯರು ದೃಢ ಪಡಿಸಿದರು ಎಂದು ಆಕೆಯ ಸಹೋದರ ತಿಳಿಸಿದ್ದಾರೆ.

ಅಲ್ಲದೆ ಪಿಲ್ಲಿ ದೇವಿ ಮನೆಯಿಂದ ಹೊರ ಹೊಗುವುದು ಅಪರೂಪ, ಯಾವಾಗಲೂ ಶಿವಧ್ಯಾನದಲ್ಲಿ ಮುಳುಗಿರುತ್ತಾರೆ ಎಂದುರು. ಹಾಗೆಯೇ ಕೇವಲ ಟೀ ಕುಡಿದು ಮಾನವ 33 ವರ್ಷ ಬದುಕುವುದು ವೈಜ್ಞಾನಿಕವಾಗಿ ಅಸಾಧ್ಯ, ಆದ್ರೆ ಪಿಲ್ಲಿ ದೇವಿ ಬದುಕಿರೋದೇ ಒಂದು ಪವಾಡ ಎಂದು ಜಿಲ್ಲಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ