ಆರೋಗ್ಯ

ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

780

ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು.

ಈರುಳ್ಳಿ ಬೀಜಗಳನ್ನು ಸುಟ್ಟು ಆ ಹೊಗೆಯನ್ನು ಹುಳು ಆಗಿರುವ ಹಲ್ಲುಗಳಿಗೆ ಕೊಟ್ಟರೆ ಹುಳಗಳು ಸತ್ತು ಹಲ್ಲು ಸ್ವಚ್ಛವಾಗುತ್ತವೆ. ಹಲ್ಲು ತೂತಾಗಿ ಹುಳು ಆಗಿದ್ದರೆ ಇಂಗನ್ನು ನೀರಲ್ಲಿ ಕುದಿಸಿ ಆ ನೀರಿನಿಂದ ಬಾಯಿ ಮುಕ್ಕಳಿಸಿದರೆ ಹುಳು ಬಿದ್ದು ಹೋಗಿ ಹಲ್ಲು ಸ್ವಚ್ಛಗೊಳ್ಳುತ್ತವೆ. ಹುಳುಕು ಹಲ್ಲುಗಳ ನಿವಾರಣೆಗೆ ಈ ಮನೆಮದ್ದು ಕೂಡ ಸಹಕಾರಿಯಾಗಿದೆ ,ಸಾಸಿವೆ ಎಣ್ಣೆ ಮತ್ತು ಸೈಂಧವ ಉಪ್ಪು ಸೇರಿಸಿ ಪೇಸ್ಟ್‌ ಮಾಡಿ ಹಲ್ಲಿನ ನಡುವೆ ಇಟ್ಟರೆ ಹುಳುಗಳು ಕಡಿಮೆಯಾಗುತ್ತವೆ. 2 ರಿಂದ 3 ಲವಂಗದ ಪುಡಿಯನ್ನು ಹಲ್ಲುಗಳಿಗೆ ತುಂಬಿದರೆ ಹುಳುಗಳು ನಿವಾರಣೆಯಾಗುತ್ತವೆ.

dental pain female

ಬೆಳ್ಳುಳ್ಳಿ ಅನ್ನೋದು ಬರಿ ಅಡುಗೆಗೆ ಮಾತ್ರ ಸೀಮಿತವಾಗದೆ ಹಲ್ಲುಗಳ ಸಮಸ್ಯೆಗೆ ಕೂಡ ಉಪಯೋಗಕಾರಿ ಬೆಳ್ಳುಳ್ಳಿ ಮತ್ತು ಸೈಂಧವ ಉಪ್ಪು ಸೇರಿಸಿ ಜಗಿದರೆ ಹಲ್ಲು ನೋವು ಕಡಿಮೆಯಾಗಿ ಹುಳುಗಳು ನಿವಾರಣೆಯಾಗುತ್ತದೆ. ಜಾಯಿಕಾಯಿ ಎಣ್ಣೆಯಲ್ಲಿ ಹತ್ತಿಯನ್ನು ಅದ್ದಿ ಹಲ್ಲುಗಳ ನಡುವೆ ಇಟ್ಟುಕೊಂಡರೆ ಹುಳುಗಳು ನಾಶವಾಗುತ್ತವೆ. ಬೇವಿನ ಎಲೆಗಳ ಕಷಾಯಕ್ಕೆ ಅರಿಶಿನ ಸೇರಿಸಿ ಬಾಯಿ ಮುಕ್ಕಳಿಸಿದರೆ ಹುಳುಕು ಹಲ್ಲು ಕಡಿಮೆಯಾಗುತ್ತದೆ. ವೀಟ್‌ಗ್ರಾಸ್‌ ಎಲೆಗಳನ್ನು ಅಗಿಯುತ್ತಿದ್ದರೆ ಹಲ್ಲಿನ ಹುಳುಗಳು ನಿವಾರಣೆಯಾಗುತ್ತದೆ. ಪ್ರತಿ ದಿನ ಬೆಳಗ್ಗೆ ಸ್ವಲ್ಪ ಬಿಸಿ ನೀರಿಗೆ ಎಳ್ಳೆಣ್ಣೆ ಸೇರಿಸಿ ಬಾಯಿ ಮುಕ್ಕಳಿಸಿದರೆ ಎಲ್ಲಾ ತರಹದ ಹಲ್ಲು ಮತ್ತು ಒಸಡಿನ ಸಮಸ್ಯೆಯಿಂದ ದೂರವಿರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…