ಸುದ್ದಿ

ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

101

ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ.

ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.

ಈ ಸಂದರ್ಭದಲ್ಲಿ ಆತ ಪತ್ರವೊಂದನ್ನು ಬರೆದಿಟ್ಟಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡು ರಾಜ್ಯಗಳಲ್ಲಿಯೂ ಪ್ರಾಮಾಣಿಕರಾಗಿರುವ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಆತ ಬರೆದಿಟ್ಟಿರುವುದಾಗಿ ಬಂಜಾರ ಹಿಲ್ಸ್ ಇನ್ಸ್ ಪೆಕ್ಟರ್ ಗೋವಿಂದ ರೆಡ್ಡಿ ಹೇಳಿದ್ದಾರೆ.

ಶ್ರೀನಗರ ಕಾಲೋನಿಯ ವೆಂಕಟೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂತರ ಮಹೇಶ್ ಓಸ್ಮಾನಿಯಾ ಆಸ್ಪತ್ರೆಗೆ ದೌಡಾಯಿಸಿದ್ದು, ಚಿಕಿತ್ಸೆ ಪಡೆದಿದ್ದಾನೆ. ಆತನ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

2009ರ ಚುನಾವಣೆ ಸಂದರ್ಭದಲ್ಲೂ ನಾಗೇಶ್ ಇದೇ ರೀತಿ ಮಾಡಿದ್ದ ಎನ್ನಲಾಗಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ . ರಾಜಶೇಖರ ರೆಡ್ಡಿ ಅವರ ನಿಷ್ಠಾವಂತ ಅಭಿಮಾನಿಯಾಗಿದ್ದು, ಅವರ ಗೆಲುವಿಗಾಗಿ ತುಂಡಿಸಿದ ನಾಲಿಗೆಯನ್ನು ತ್ಯಾಗ ಮಾಡಿರುವುದಾಗಿ ಹೇಳಿಕೆ ನೀಡಿದ್ದ. 2004ರ ಚುನಾವಣೆ ಸಂದರ್ಭದಲ್ಲೂ ಆತ ಇದೇ ರೀತಿಯಲ್ಲಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.ತೆಲಂಗಾಣದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಸರ್ಕಾರಿ ಯೋಜನೆಗಳು

    ನಿಮ್ಮ ಮನೆಗೆ ಬರ್ತಾ ಇದೆ ಉಚಿತ ಅನಿಲ ಭಾಗ್ಯ..!ನಿಮ್ಗೆ ಉಚಿತ ಸಿಲಿಂಡರ್,ಸ್ಟವ್ ಬೇಕಂದ್ರೆ ಮುಂದೆ ಓದಿ…

    ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್‌ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…