ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಲಸ ತೊರೆದಿದ್ದ ಸಂತ್ರಸ್ತ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ದತೆ ನಡೆಸುತ್ತಿದ್ದ ಎಂದು ಆತನ ಸಂಬಂಧಿ ಕಾಂತರಾಜ್ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಶ್ಯಾನಾದ್ರಾಹಳ್ಳಿ ನಿವಾಸಿಯಾಗಿರುವ ಸಂತ್ರಸ್ತ ಜೂನ್ 2 ರಂದು ಮೈಸೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯಲು ಹೋಗಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಆದಾಗ್ಯೂ, ಅಂದು ಪರೀಕ್ಷಾ ಕೇಂದ್ರಕ್ಕೆ ನಿಗದಿತ ವೇಳೆಗೆ ಹೋಗದೆ ಮನೆಗೆ ಹಿಂತಿರುಗುತ್ತಿದ್ದ ಎಂದು ಕಾಂತರಾಜ್ ಹೇಳಿದ್ದಾರೆ.

ಮನೆಗೆ ಹಿಂದಿರುವ ವೇಳೆಯಲ್ಲಿ ಊಟಿ ರಸ್ತೆಯ ರಾಘವಪುರ ಗ್ರಾಮದ ಬಳಿ ತಂಗಿದ್ದು, ಅಲ್ಲಿಯೇ ರಾತ್ರಿಯಿಡೀ ತಂಗಿದ್ದಾನೆ. ಮಾರನೇ ದಿನ ಕೆಬೆಕಟ್ಟೆ ಶನಿ ದೇವಾಲಯಕ್ಕೆ ಹೋಗಿದ್ದಾಗ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಆತನ ಊರಿನ ಹೆಸರು ತಿಳಿಸಿದ ನಂತರ ಆತ ದಲಿತ ಎಂದು ತಿಳಿದು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
ಸಂತ್ರಸ್ತನ ತಂದೆ ನಿವೃತ್ತ ಬಿಇಒ ಅಧಿಕಾರಿ ಆತನನನ್ನು ರಕ್ಷಿಸಲು ಹೋದಾಗ ಅವರನ್ನು ಕೂಡಾ ಕಂಬಕ್ಕೆ ಕಟ್ಟಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾನಸಿಕವಾಗಿ ಅಸ್ವಸ್ಥರಾದಗ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಒಂದು ದಿನ ಆತ ಮಾಡಿದ ವಿಡಿಯೋಗಳನ್ನು ಪಡೆಯಲು ಪ್ರಯತ್ನಿಸಿದ್ದಾಗಿ ಸಂತ್ರಸ್ತನ ಸ್ನೇಹಿತ ಮೂರ್ತಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.