ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದಾಗ್ಯೂ, ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಲಸ ತೊರೆದಿದ್ದ ಸಂತ್ರಸ್ತ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ದತೆ ನಡೆಸುತ್ತಿದ್ದ ಎಂದು ಆತನ ಸಂಬಂಧಿ ಕಾಂತರಾಜ್ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಶ್ಯಾನಾದ್ರಾಹಳ್ಳಿ ನಿವಾಸಿಯಾಗಿರುವ ಸಂತ್ರಸ್ತ ಜೂನ್ 2 ರಂದು ಮೈಸೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯಲು ಹೋಗಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಆದಾಗ್ಯೂ, ಅಂದು ಪರೀಕ್ಷಾ ಕೇಂದ್ರಕ್ಕೆ ನಿಗದಿತ ವೇಳೆಗೆ ಹೋಗದೆ ಮನೆಗೆ ಹಿಂತಿರುಗುತ್ತಿದ್ದ ಎಂದು ಕಾಂತರಾಜ್ ಹೇಳಿದ್ದಾರೆ.
ಮನೆಗೆ ಹಿಂದಿರುವ ವೇಳೆಯಲ್ಲಿ ಊಟಿ ರಸ್ತೆಯ ರಾಘವಪುರ ಗ್ರಾಮದ ಬಳಿ ತಂಗಿದ್ದು, ಅಲ್ಲಿಯೇ ರಾತ್ರಿಯಿಡೀ ತಂಗಿದ್ದಾನೆ. ಮಾರನೇ ದಿನ ಕೆಬೆಕಟ್ಟೆ ಶನಿ ದೇವಾಲಯಕ್ಕೆ ಹೋಗಿದ್ದಾಗ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಆತನ ಊರಿನ ಹೆಸರು ತಿಳಿಸಿದ ನಂತರ ಆತ ದಲಿತ ಎಂದು ತಿಳಿದು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
ಸಂತ್ರಸ್ತನ ತಂದೆ ನಿವೃತ್ತ ಬಿಇಒ ಅಧಿಕಾರಿ ಆತನನನ್ನು ರಕ್ಷಿಸಲು ಹೋದಾಗ ಅವರನ್ನು ಕೂಡಾ ಕಂಬಕ್ಕೆ ಕಟ್ಟಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾನಸಿಕವಾಗಿ ಅಸ್ವಸ್ಥರಾದಗ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಒಂದು ದಿನ ಆತ ಮಾಡಿದ ವಿಡಿಯೋಗಳನ್ನು ಪಡೆಯಲು ಪ್ರಯತ್ನಿಸಿದ್ದಾಗಿ ಸಂತ್ರಸ್ತನ ಸ್ನೇಹಿತ ಮೂರ್ತಿ ಹೇಳಿದ್ದಾರೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…