ಸುದ್ದಿ

ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

252

ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ.

ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ ನಿಧಿ ಸಿಕ್ಕಿದೆ. ಆದರೆ ಏಳನೇ ನೆಲಮಾಳಿಗೆಯ ಬಾಗಿಲನ್ನು ಇಲ್ಲಿಯವರೆಗೆ ತೆರೆಯಲಾಗಿಲ್ಲ ಅಥವಾ ಯಾರೂ ಅದನ್ನು ತೆರೆಯಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಇದರ ಹಿಂದೆ ಆಳವಾದ ರಹಸ್ಯವೂ ಇದೆ ಎಂದು ಹೇಳಲಾಗುತ್ತದೆ.

ಪದ್ಮನಾಭಸ್ವಾಮಿ ದೇವಸ್ಥಾನವನ್ನು ವಿಷ್ಣುವಿಗೆ ಅರ್ಪಿಸಲಾಗಿದೆ. ಈ ಐತಿಹಾಸಿಕ ದೇವಾಲಯವು ತಿರುವನಂತಪುರಂನ ಜನಪ್ರಿಯ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಈ ದೇವಾಲಯವನ್ನು 16 ನೇ ಶತಮಾನದಲ್ಲಿ ತಿರುವಾಂಕೂರು ರಾಜರು ನಿರ್ಮಿಸಿದ್ದಾರೆಂದು ಹೇಳಲಾಗುತ್ತದೆ. ಅವರು ದೇವಾಲಯದ ನೆಲಮಾಳಿಗೆಯಲ್ಲಿ ಅಪಾರ ಪ್ರಮಾಣದ ನಿಧಿಯನ್ನು ಇಟ್ಟಿದ್ದರು ಎಂದು ನಂಬಲಾಗಿದೆ.

ಈ ದೇವಾಲಯದ ಆರು ನೆಲಮಾಳಿಗೆಗಳನ್ನು ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ತೆರೆಯಲಾಗಿದ್ದು, ಅಲ್ಲಿ ಅಪಾರ ಪ್ರಮಾಣದ ಚಿನ್ನ-ಬೆಳ್ಳಿ ಮತ್ತು ವಜ್ರ-ಆಭರಣಗಳು ಪತ್ತೆಯಾಗಿವೆ. ಅವುಗಳ ಮೌಲ್ಯ ಶತಕೋಟಿ ಮತ್ತು ಟ್ರಿಲಿಯನ್ ಗಳಷ್ಟಿದೆ.ಕುತೂಹಲಕಾರಿ ಸಂಗತಿಯೆಂದರೆ ಈ ದೇವಾಲಯದ ಏಳನೇ ನೆಲಮಾಳಿಗೆಯ ಬಾಗಿಲು ತೆರೆಯುವ ಪ್ರಯತ್ನ ಮಾಡಲಾಯಿತು ಎಂದು ಹೇಳಲಾಗುತ್ತದೆ. ಆದರೆ ಬಾಗಿಲಿನ ಮೇಲೆ ದೊಡ್ಡ ಹಾವಿನ ಚಿತ್ರವನ್ನು ನೋಡಿದ ನಂತರ ಕೆಲಸವನ್ನು ನಿಲ್ಲಿಸಲಾಯಿತು. ಏಳನೇ ಬಾಗಿಲು ತೆರೆಯುವುದು ಅಪಾಯಕಾರಿ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.