ಸುದ್ದಿ

‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

30

ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು.

ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ರೀತಿಯ ಅಭಿವೃದ್ಧಿ ಮಾಡಬಹುದು ಎಂದು ಅಧಿಕಾರಿಳ ಜೊತೆ ಚರ್ಚಿಸಿದ್ದೇನೆ. ಇನ್ನು ಖಾಸಗಿ ಪ್ರವಾಸೋದ್ಯಮದಲ್ಲಿ ಆಸಕ್ತಿ ಇರುವವರನ್ನು ಹೂಡಿಕೆಗೆ ಆಕರ್ಷಿಸಲು ಚಿಂತನೆ ಮಾಡಲಾಗಿದೆ ಎಂದರು.

ಸದ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ 243 ಅಧಿಕಾರಿಗಳ ಹುದ್ದೆ ಖಾಲಿ ಇದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುತ್ತದೆ, ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ನಿರ್ಧಾರ ಮಾಡಲಾಗಿದೆ, ಪ್ರದೇಶಕ್ಕೆ ಅನುಗುಣವಾಗಿ ಸ್ಟೇಡಿ ಮಾಡಿ ಸಬ್ಸಿಡಿ ಮೂಲಕ ಉದ್ಯೋಗ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

ಅಂತೆಯೇ ಗೋಲ್ಡನ್ ಚಾರಿಯಿಟಿಯಿಂದ ಇಲಾಖೆಗೆ 41ಕೋಟಿ ನಷ್ಟವಾಗಿದೆ, ಅದಕ್ಕಾಗಿ ಅದನ್ನು ಸ್ಥಗಿತಗೊಳಿಸಲಾಗಿದ್ದು, ಜಂಗಲ್ ಲಾಡ್ಜ್​ ಮತ್ತು ಕೆಎಸ್​​ಟಿಡಿಸಿ ಲಾಭದಲ್ಲಿವೆ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶವಿದೆ, ಯಾತ್ರಿ ನಿವಾಸಗಳ ಬಳಕೆ ಬಗ್ಗೆಯೂ ಅಧ್ಯಯನ ವರದಿ ಕೇಳಿದ್ದೇವೆ ಬಳಿಕ ಅದನ್ನು ಗಮನಿಸಿ ಯೋಜನೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ನುಡಿದರು.

ಇನ್ನು ಜಿಲ್ಲೆಗಳಲ್ಲಿ ಬೇಡಿಕೆಯೇ ಇಲ್ಲದೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಕೊಡಲಾಗುತ್ತಿದೆ ಇದರಿಂದ ಫಲಾನುಭವಿಗಳಿಗೆ ಸಾಲದ ಹೊರೆ ಹೆಚ್ಚಿದ್ದು ಇದರ ಬಗ್ಗೆಯೂ ಕೂಡ ಅಧ್ಯಯನ ವರದಿ ಪಡೆದು ಮುಂದಿನ ನಿರ್ಧಾರ ಮಾಡಲಾಗಿದೆ ಇದುವರೆಗೆ 2,400 ಜನರಿಗೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ವಿತರಣೆ ಮಾಡಲಾಗಿದೆ, ಎಲ್ಲರನ್ನು ತೃಪ್ತಿ ಪಡಿಸಲು ಮಾತ್ರ ಪ್ರವಾಸೋದ್ಯಮ ಇಲಾಖೆ ಅನುದಾನ ಬಳಕೆಯಾಗುತ್ತಿದೆ ಹೊರತು ಪ್ರವಾಸೋದ್ಯಮ ಅಭಿವೃದ್ದಿಗೆ ಬಳಕೆಯಾಗುತ್ತಿಲ್ಲ ಎಂದು ಸಚಿವ ಸಿಟಿ ರವಿ ಅವರು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ