ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು ಅನಾಹುತವಾಗಿದೆ. ರಾತ್ರಿ 1 ಗಂಟೆಗೆ ದೂರು ನೀಡಿದರೂ ಸ್ಪಂದಿಸಿದ ಬೆಸ್ಕಾಂ ಹೊಸಕೆರೆಹಳ್ಳಿಯಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಇಲ್ಲ ಎಂದು ರಾತ್ರಿ 1 ಗಂಟೆಗೆ ಟ್ವಿಟ್ಟರ್ ಮೂಲಕ ದೂರು ನೀಡಿದರೂ ಕೂಡ ಆಗಲೇ ಸ್ಪಂದಿಸಿದ್ದಾರೆ. ದಿನದ 24 ಗಂಟೆಯೂ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಾತ್ರಿಇಡೀ ಕಾರ್ಯ ನಿರ್ವಹಿಸಿದ ಬೆಸ್ಕಾಂ ಸಿಬ್ಬಂದಿಗಳು ಬಸವನಗುಡಿ, ರಾಜರಾಜೇಶ್ವರಿನಗರ ಸೇರಿದಂತೆ ಹಲವು ಕಡೆಗಳಲ್ಲಿ ಸೇರಿ ಒಟ್ಟು 83 ಮರಗಳು ಧರೆಗುರುಳಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ಬಳಿಕ ಗ್ರಾಹಕರ ದೂರು ಆಲಿಸಿ ಬಂದ ಬೆಸ್ಕಾಂ ಸಿಬ್ಬಂದಿಗಳು ಬೆಳಗ್ಗೆಯವರೆಗೂ ಕಾರ್ಯ ನಿರ್ವಹಿಸಿದ್ದಾರೆ. ರಾತ್ರಿ 1 , 2 ಗಂಟೆ ಸಮಯದಲ್ಲೂ ಕೂಡ ಮರಗಳನ್ನು ಕಡಿದು, ವಿದ್ಯುತ್ ತಂತಿಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬೆಂಗಳೂರು ಜನತೆ ಇವರಿಗೆ ಧನ್ಯವಾದ ಹೇಳಲೇ ಬೇಕು.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಬ್ಬಂದಿಗಳಿಗೆ ಪೀಕಲಾಟ ಮುಂಗಾರು ಆರಂಭವಾಗುವ ಮೊದಲೇ ಇಡೀ ಬೆಂಗಳೂರು ಸಮೀಕ್ಷೆ ನಡೆಸಿ, ವಿದ್ಯುತ್ ತಂತಿಗಳ ಸಮೀಪ ಇರುವ ಬೀಳುವ ಹಂತದಲ್ಲಿರುವ ಮರದ ರೆಂಬೆಗಳನ್ನು ಕತ್ತರಿಸುವುದು, ಅಥವಾ ಹಳೆಯ ಮರಗಳನ್ನು ಕತ್ತರಿಸುವ ಕೆಲಸವನ್ನು ಬಿಬಿಎಂಪಿ ಹಾಗೂ ಬೆಸ್ಕಾಂ ಸೇರಿ ಮಾಡಬೇಕಿತ್ತು. ಇದೀಗ ಮಳೆ ಬಂದ ನಂತರ ಅನಾಹುತ ಸಂಭವಿಸಿದ ಮೇಲೆ ಬೆಸ್ಕಾಂ ಸಿಬ್ಬಂದಿಗಳಿಗೆ ಇದು ತಲೆನೋವು, ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಲೈನ್ಮೆನ್ಗಳು ದಂಡ ತೆರವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜರಾಜೇಶ್ವರಿನಗರದ ಸ್ಥಿತಿ ನೋಡಿ ಹೇಗಿದೆ? ರಾಜರಾಜೇಶ್ವರಿನಗರದಲ್ಲಿ ಅತಿ ಹೆಚ್ಚು ಅವಾಂತರವಾಗಿದೆ, ಇಡೀ ರಸ್ತೆಯ ತುಂಬೆಲ್ಲಾ ವಿದ್ಯುತ್ ಕಂಬಗಳು, ಮರಗಳು, ವಿದ್ಯುತ್ ತಂತಿಗಳೇ ಕಾಣಿಸುತ್ತಿವೆ, ಇವುಗಳನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!