ಸಿನಿಮಾ

ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

103

ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ.

ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ ಚಿತ್ರದ ಆಫರ್ ಅನ್ನೂ ಕೂಡ ನಯವಾಗಿ ತಿರಸ್ಕರಿಸಿದ್ದಾರೆ.

ನಿರ್ದೇಶಕ ಅನಿಲ್ ರವಿಪುಡಿ ನಿರ್ದೇಶನ ಈ ಬಹು ನಿರೀಕ್ಷಿತ ಚಿತ್ರದಲ್ಲಿ ನಟ ಮಹೇಶ್ ಬಾಬು ಎದುರಿಗೆ ಖಡಕ್ ಪಾತ್ರದ ಆಫರ್ ನೀಡಲಾಗಿದೆಯಾದರೂ ಇದಕ್ಕೆ ಉಪೇಂದ್ರ ನೋ ಎಂದಿದ್ದಾರೆ. ಅಲ್ಲದೇ ಲೋಕಸಭಾ ಚುನಾನಣೆ ಮುಗಿಯುವವರೆಗೂ ತಾವು ಯಾವುದೇ ಹೊಸ ಚಿತ್ರಗಳಿಗೆ ಸಹಿ ಹಾಕುವುದಿಲ್ಲ ಎಂದು ಉಪೇಂದ್ರ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನು ಅನಿಲ್ ರವಿ ಪುಡಿ ನಿರ್ದೇಶನದ ಈ ಚಿತ್ರದಲ್ಲಿ ಮಹೇಶ್ ಬಾಬು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ಚಿತ್ರದ ನಾಯಕ ನಟಿಯ ಪಾತ್ರಕ್ಕಾಗಿ ಈ ಹಿಂದೆ ಚಿತ್ರದ ನಿರ್ಮಾಪಕರು ನಟಿ ಸಾಯಿ ಪಲ್ಲವಿ ಅವರನ್ನು ಸಂಪರ್ಕಿಸಿದ್ದರು. ಆದರೆ ಚಿತ್ರದ ಪಾತ್ರವಿಷ್ಟವಾದರೂ ಚಿತ್ರದಲ್ಲಿ ಪಾತ್ರ ಕಾಲಾವಧಿ ಕೊಂಚವೇ ಇದೆ ಎಂದು ನಟಿ ಸಾಯಿಪಲ್ಲವಿ ಈ ಚಿತ್ರ ಬೇಡ ಎಂದು ಹೇಳಿದ್ದರು.

ಇದೀಗ ಇದೇ ಪಾತ್ರಕ್ಕಾಗಿ ಚಿತ್ರತಂಡ ಕಿರಿಕ್ ನಟಿ ರಶ್ಮಿಕಾ ಮಂದಣ್ಣರನ್ನು ಸಂಪರ್ಕಿಸುತ್ತಿದೆ.ಇನ್ನು ಇದೇ ಚಿತ್ರದ ಮತ್ತೊಂದು ಮಹಿಳಾ ಪೊಲೀಸ್ ಅಧಿಕಾರಿಯ ಪಾತ್ರಕ್ಕಾಗಿ ಚಿತ್ರತಂಡ  ಖ್ಯಾತ ನಟೆ ವಿಜಯ ಶಾಂತಿ ಅವರನ್ನು ಸಂಪರ್ಕಿಸಿದ್ದು, ಅವರಿಂದ ಒಪ್ಪಿಗೆ ದೊರೆತ ಬಳಿಕ ಅವರ ಪಾತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..