ಸುದ್ದಿ

31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

13

ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ.

ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ ದಿನವನ್ನು ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಆಚರಿಸಿಕೊಳ್ಳುತ್ತಿದ್ದಾರೆ. ವಿಶ್ವ ದಿಗ್ಗಜರು ಹಾಗೂ ಕ್ರಿಕೆಟ್​ ಅಭಿಮಾನಿಗಳು ಕೊಹ್ಲಿಯ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸುತ್ತಿದ್ದು, ಟ್ವಿಟರ್​ನಲ್ಲಿ HappyBirthdayVirat  ಟ್ರೆಂಡಿಂಗ್ ಆಗಿದೆ.

ಸದ್ಯ ಟೀಮ್ ಇಂಡಿಯಾದ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ, ಟೀಮ್ ಇಂಡಿಯಾದ ಸೂಪರ್​ ಸ್ಟಾರ್​ ಆಗಿದ್ದಾರೆ. ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಟೆಸ್ಟ್ ಚಾಂಪಿಯನ್​​ಶಿಪ್​​ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ 2-0 ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಟೆಸ್ಟ್ ಶ್ರೇಯಾಂಕದಲ್ಲೂ ನಂ.1 ಸ್ಥಾನ ಗಟ್ಟಿಗೊಳಿಸಿಕೊಂಡಿದೆ. ಇದೀಗ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ, ಟೆಸ್ಟ್ ಸರಣಿ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…