ಸುದ್ದಿ

ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

32

ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಜಲಮಂಡಳಿ ವತಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ’ ಎಂದು ಸಚಿವರು ಹೇಳಿದರು.ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಸುಮಾರು ಒಂದೂವರೆ ವರ್ಷದಿಂದ ನೀರು ಶುದ್ಧೀಕರಣ ಮಾಡುವ ಟ್ಯಾಂಕ್ ಕಾರ್ಯ ನಡೆಯುತ್ತಿತ್ತು

ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನೀರು ಶುದ್ದೀಕರಣ ಮಾಡುವ ಮೂರು ಟ್ಯಾಂಕ್‌ಗಳನ್ನು ನಿರ್ಮಾಣ ಮಾಡುವ ಗುತ್ತಿಗೆಯನ್ನು ಎನ್ವರೋನ್ ಎಂಬ ಕಂಪನಿ ಪಡೆದಿತ್ತು. ನೀರಿನ ಟ್ಯಾಂಕ್ ಕುಸಿದ ಬಳಿಕ ಪೊಲೀಸರು ಗುತ್ತಿಗೆ ಪಡೆದಿದ್ದ ಕಂಪನಿಯ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದಾರೆ.ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಹಾಕಲಾಗಿದ್ದ ಪೈಪ್ ಕುಸಿದು ಬಿದ್ದ ಕಾರಣ ಸೆಂಟ್ರಿಂಗ್ ಕುಸಿದು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಘಟನೆಗೆ ಗುತ್ತಿಗೆದಾರರೇ ಹೊಣೆ ಎಂದು ಅವರಿಂದಲೇ ಆದ ನಷ್ಟವನ್ನು ಪಡೆಯುಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ನೀರಿನ ಟ್ಯಾಂಕ್ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಇಂಜಿನಿಯರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗುತ್ತಿಗೆದಾರನ ವಿರುದ್ಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ. ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದಿದ್ದರಿಂದ 3 ಜನರು ಮೃತಪಟ್ಟಿದ್ದಾರೆ. 20 ಜನರು ಕೊಲಂಬಿಯಾ ಏಷಿಯಾ ಮತ್ತು ಆಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಕೆಲವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಜಲಮಂಡಳಿ ಭರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮ್ಮ ಉತ್ತಮ ನಿದ್ರೆಗಾಗಿ ಸೇವಿಸಬಹುದಾದ ಆಹಾರಗಳು ಯಾವುವು ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…