ಸುದ್ದಿ

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

67

ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.

ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು ಸರಬರಾಜು ಪೈಪುಗಳ ದುರಸ್ಥಿ-ಬದಲಾವಣೆ ಕಾಮಗಾರಿಗಳು ಮತ್ತು ಅತ್ಯವಶ್ಯಕತೆಯಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಹಾಗೂ ಪಂಪು ಮೋಟಾರ್ ಅಳವಡಿಸುವ ಕಾಮಗಾರಿಗಳನ್ನು ಮಾತ್ರ ಈ ಅನುದಾನದಡಿ ಕೈಗೆತ್ತಿಕೊಳ್ಳಲು ಹಾಗೂ ಅನುಮೋದನೆ ನೀಡಿರುವ ಅನುದಾನವನ್ನು ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶಗಳಿಗೆ ಬಳಸಬಹುದಾಗಿದೆ.

ಇತರೆ ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರು ಕಾಮಗಾರಿಗಳಿಗೆ ಅವಶ್ಯಕವಿರುವ ಪಂಪು, ಮೋಟಾರ್, ಪೈಪ್ಲೈನ್ ಮತ್ತು ಇತರೆ ಸಲಕರಣೆಗಳ ಸಂಗ್ರಹಣೆಯನ್ನು ನಿಯಮಾನುಸಾರ ಕೆಟಿಪಿಪಿ ಕಾಯಿದೆ 1999 ಮತ್ತು ನಿಯಮಗಳು 2000 ‍ರನ್ವಯ ಇ-ಪ್ರಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಕೈಗೆತ್ತಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

40 ಕೋಟಿ ರೂ. ಬಿಡುಗಡೆ ಮಾಡಲಾದ ಅನುದಾನವನ್ನು ಜಿಲ್ಲಾಧಿಕಾರಿಗಳು ತಮ್ಮ ಖಾತೆಯಲ್ಲಿ ಅನವಶ್ಯಕವಾಗಿ ಜಮಾಗೊಳಿಸಬಾರದು. ಖಜಾನೆಯಿಂದ ಹಣ ಪಡೆದು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಆದ್ಯತೆ ಮೇರೆಗೆ ಬಳಸಬೇಕು. ಹಾಗೂ ಅನುದಾನ ಬಳಕೆ ಸಂಬಂಧ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಬಳಕೆ ಪ್ರಮಾಣ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಿ, ಅನುದಾನ ಬಳಕೆ ಬಗ್ಗೆ ಖಚಿತಪಡಿಸಬೇಕು ಎಂದು ಆದೇಶಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…