ಸುದ್ದಿ

ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

114

ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ