ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ.
ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರಾದ ಮುನಿಪ್ರಸಾದ್ ದಂಪತಿಯಿಂದ ದೂರು ದಾಖಲಿಸಲಾಗಿದೆ. ಮನೆ ಖಾಲಿ ಮಾಡುವ ವೇಳೆ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ ಎನ್ನಲಾಗಿದೆ.
2 ತಿಂಗಳ ಹಿಂದೆಯೇ ಮನೆ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಹಾಸನದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದರಿಂದ ಕಾಲಾವಕಾಶ ನೀಡಬೇಕು ಎಂದು ಯಶ್ ಅವರ ತಾಯಿ ಮನವಿ ಮಾಡಿದ್ದು, ಮೇ 31 ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿತ್ತು. ಆದರೆ, ಮೇ 31 ರಂದು ಮನೆ ಖಾಲಿ ಮಾಡದ ಯಶ್ ಕುಟುಂಬ ಜೂನ್ 7 ರಂದು ಮನೆ ಖಾಲಿ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಮನೆಯ ಮಾಲೀಕರು ಆರೋಪಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.