ಸಿನಿಮಾ

ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

149

ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ ಬಾಡಿಗೆ ಮನೆಯಲ್ಲಿ ಆರು ತಿಂಗಳು ವಾಸ್ತವ್ಯ ಮುಂದುವರೆಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಪುಷ್ಪಾ ಕೋರಿದ್ದಾರೆ.

ಮನೆ ಮಾಲೀಕ ಡಾ. ಎಂ. ಮುನಿಪ್ರಸಾದ್ ಹಾಗೂ ಬಾಡಿಗೆದಾರರಾದ ಯಶ್ ಕುಟುಂಬದ ನಡುವೆ ವ್ಯಾಜ್ಯ ತಲೆದೋರಿದ ಹಿನ್ನೆಲೆಯಲ್ಲಿ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ 25 ಲಕ್ಷ ರೂಪಾಯಿಗಳನ್ನು ಠೇವಣಿಯಾಗಿರಿಸಿಕೊಂಡಿದ್ದಲ್ಲದೆ 2019 ರ ಮಾರ್ಚ್ 31 ರೊಳಗೆ ಮನೆ ಖಾಲಿ ಮಾಡುವಂತೆ ಯಶ್ ಕುಟುಂಬಕ್ಕೆ ಆದೇಶಿಸಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.