News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸಿನಿಮಾ

ಯಶ್ ಚಿತ್ರ KGFಗೆ ಬ್ಯಾನರ್ ಹಾಕಿ ಬೆಂಬಲ ಕೊಟ್ಟ ಡಿ ಬಾಸ್ ಫ್ಯಾನ್ಸ್..ಕಡೆಗೂ ಒಂದಾದ್ರು ಯಶ್ ಮತ್ತು ದರ್ಶನ್ ಫ್ಯಾನ್ಸ್…

264

ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ.

ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ ಹೆಸರು ಮಾಡಬೇಕು ಎಂಬ ಕಾರಣದಿಂದ ಸಮಸ್ತ ಕನ್ನಡ ಚಿತ್ರ ರಸಿಕರೂ ಒಗ್ಗಟ್ಟಾಗಿ ಕೆಜಿಎಫ್ ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ. ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ.

ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.
ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕೆಜಿಎಫ್ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ