ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ, ಪುಣೆಯ ಕೇಂದ್ರ ಕಚೇರಿ, ಗುರ್ಗಾಂವ್ ಕೇಂದ್ರ ಕಚೇರಿ ಹಾಗೂ ಪುಣೆಯ ಹೋಟೆಲ್ ಪ್ರೀತ್ ಪಂಜಾಬಿ ಸ್ವಾದ್ ಹೋಟೆಲ್‍ಗೆ 55 ಸಾವಿರ ರೂ. ದಂಡ ವಿಧಿಸಿದ್ದು, 45 ದಿನಗಳಲ್ಲಿ ದಂಡವನ್ನು ಗ್ರಾಹಕರಿಗೆ ಪಾವತಿಸವಂತೆ ಸೂಚಿಸಿದೆ. ತಡವಾದರೆ ಅದಕ್ಕೆ ಅನ್ವಯವಾಗುವ ಬಡ್ಡಿಯನ್ನು ಸೇರಿಸಿ ಹಣ ನಿಡುವಂತೆ ಸೂಚಿಸಿದೆ.
ಪನ್ನೀರ್ ಬಟರ್ ಮಸಾಲವನ್ನು ಆರ್ಡರ್ ಮಾಡಿದ್ದ ವಕೀಲರಿಗೆ ಅದರ ಬದಲಿಗೆ ಬಟರ್ ಚಿಕನ್ ಡೆಲಿವರಿ ಮಾಡಲಾಗಿದೆ. ಎರಡಕ್ಕೂ ಬಳಸುವ ಸಂಬಾರು ಪದಾರ್ಥಗಳು ಬಹುತೇಕ ಒಂದೇ ಥರ ಇರುವುದರಿಂದ ವಕೀಲರಿಗೆ ವ್ಯತ್ಯಾಸ ಗೊತ್ತಾಗದೆ ಚಿಕನ್ ಅನ್ನೇ ತಿಂದಿದ್ದರು.ಅಂದ ಹಾಗೆ ಅವರಿಗೆ ಹೀಗೆ ಸಸ್ಯಾಹಾರದ ಬದಲಿಗೆ ಮಾಂಸಾಹಾರ ಖಾದ್ಯವನ್ನು ಡೆಲಿವರಿ ಮಾಡಿದ್ದು ಎರಡು ಬಾರಿಯಂತೆ.
ಈ ಕುರಿತು ಝೊಮ್ಯಾಟೊ ಸ್ಪಷ್ಟಪಡಿಸಿದ್ದು, ವಕೀಲರು ಆಪ್‍ನಲ್ಲಿಯೇ ದೂರು ನೀಡಿದ್ದರು. ಈಗಾಗಲೇ ಅವರ ಹಣವನ್ನು ಮರುಪಾವತಿ ಮಾಡಲಾಗಿದೆ ಎಂದು ತಿಳಿಸಿದೆ. ಅಲ್ಲದೆ ಬೇರೆ ಪದಾರ್ಥ ಡೆಲಿವರಿ ಮಾಡಿರುವುದು ಹೋಟೆಲ್ ತಪ್ಪು ಎಂದು ಝೊಮ್ಯಾಟೊ ವಾದಿಸಿದೆ. ಹೋಟೆಲ್‍ನಷ್ಟೇ ತಪ್ಪು ಸಂಸ್ಥೆಯದ್ದೂ ಇದೆ ಎಂದು ಗ್ರಾಹಕರ ನ್ಯಾಯಾಲಯ ತಿಳಿಸಿದೆ. ಹೋಟೆಲ್ ಸಹ ತನ್ನ ತಪ್ಪನ್ನು ಒಪ್ಪಿಕೊಂಡಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…