ಸಿನಿಮಾ

ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

920

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅರ್ಜಿ ವಿಚಾರಣೆಯನ್ನು ಶನಿವಾರ ನಡೆಸಿದ ಕೋರ್ಟ್ ಅಂಜನಿಪುತ್ರ ಸಿನಿಮಾ ಪ್ರದರ್ಶನ ಮಾಡದಂತೆ ಆದೇಶಿಸಿ ಜ. 2ಕ್ಕೆ ವಿಚಾರಣೆ ಮುಂದೂಡಿದೆ.

ಸಂಜೆ 7.30ರ ನಂತರ ರಾಜ್ಯಾದ್ಯಾಂತ ಎಲ್ಲಾ ಚಿತ್ರಮಂದರಿಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ.

‘ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ’ ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಮೂಡಿಬಂದಿದ್ದು ಗುರುವಾರ ಬಿಡುಗಡೆಯಾಗಿತ್ತು.

ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.