ಸುದ್ದಿ

ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

35

ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು.

ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದರು.

ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ, ಸುಮಲತಾ, ಅಭಿಶೇಖ್, ರಾಕ್‌ಲೈನ್ ವೆಂಕಟೇಶ್ ಅವರುಗಳು ಮಂಡ್ಯದತ್ತ ತೆರಳಿದರು. ಮಂಡ್ಯದಲ್ಲಿ ಇಂದು ಸ್ವಾಭಿಮಾನಿ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸುಮಲತಾ ಅವರು ಇಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಭಾರಿ ನಿರೀಕ್ಷೆಯನ್ನು ಈ ಸಮಾವೇಶ ಹುಟ್ಟುಹಾಕಿದ್ದು, ಸುಮಲತಾ ಅವರೊಂದಿಗೆ ದರ್ಶನ್, ಯಶ್ ಅವರೂಗಳೂ ಸಹ ಭಾಗವಹಿಸುತ್ತಿದ್ದಾರೆ. ಮಂಡ್ಯದ ಜಿದ್ದಾ-ಜಿದ್ದಿನ ಲೋಕಸಮರದಲ್ಲಿ ಭಾರಿ ಅಂತರದಲ್ಲಿ ಜಯಿಸಿ ಎದುರಾಳಿಗಳಿಗೆ ಕೃತಿಯ ಮೂಲಕ ಈಗಾಗಲೇ ಉತ್ತರಿಸಿರುವ ಸುಮಲತಾ ಅವರು ಮಾತಿನ ಮೂಲಕ ಇಂದು ಉತ್ತರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…