ಸುದ್ದಿ

ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

25

ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು.

ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದರು.

ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ, ಸುಮಲತಾ, ಅಭಿಶೇಖ್, ರಾಕ್‌ಲೈನ್ ವೆಂಕಟೇಶ್ ಅವರುಗಳು ಮಂಡ್ಯದತ್ತ ತೆರಳಿದರು. ಮಂಡ್ಯದಲ್ಲಿ ಇಂದು ಸ್ವಾಭಿಮಾನಿ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸುಮಲತಾ ಅವರು ಇಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಭಾರಿ ನಿರೀಕ್ಷೆಯನ್ನು ಈ ಸಮಾವೇಶ ಹುಟ್ಟುಹಾಕಿದ್ದು, ಸುಮಲತಾ ಅವರೊಂದಿಗೆ ದರ್ಶನ್, ಯಶ್ ಅವರೂಗಳೂ ಸಹ ಭಾಗವಹಿಸುತ್ತಿದ್ದಾರೆ. ಮಂಡ್ಯದ ಜಿದ್ದಾ-ಜಿದ್ದಿನ ಲೋಕಸಮರದಲ್ಲಿ ಭಾರಿ ಅಂತರದಲ್ಲಿ ಜಯಿಸಿ ಎದುರಾಳಿಗಳಿಗೆ ಕೃತಿಯ ಮೂಲಕ ಈಗಾಗಲೇ ಉತ್ತರಿಸಿರುವ ಸುಮಲತಾ ಅವರು ಮಾತಿನ ಮೂಲಕ ಇಂದು ಉತ್ತರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…