ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭುವನೇಶ್ವರದ ಟ್ರಾಫಿಕ್ ಪೊಲೀಸ್ ಹಾಗೂ ಆರ್ಟಿಓ ಸಿಬ್ಬಂದಿ ಬುಧವಾರ ನಗರದ ಆಚಾರ್ಯ ವಿಹಾರ ಚೌಕ್ನಲ್ಲಿ ಆಟೋ ರಿಕ್ಷಾ ತಡೆದು, ಸಂಚಾರಿ ನಿಯಮ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ 47,500 ರೂ.ಗಳ ಚಲನ್ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾಮಾನ್ಯ ಅಪರಾಧ 500ರೂ., ಅಮಾನ್ಯಗೊಂಡ ಡ್ರೈವಿಂಗ್ ಲೈಸೆನ್ಸ್ 5000 ರೂ., ಪರ್ಮಿಟ್ ನಿಯಮ ಉಲ್ಲಂಘಿಸಿದ್ದಕ್ಕೆ 10,000 ರೂ., ಕುಡಿದು ವಾಹನ ಚಲಾಯಿಸಿದ್ದಕ್ಕೆ 10,000ರೂ., ಗಾಳಿ, ಶಬ್ದ ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ 10,000, ಅನಧಿಕೃತ ವ್ಯಕ್ತಿಗೆ ಚಾಲನೆ ಮಾಡಲು ಬಿಟ್ಟಿದ್ದಕ್ಕೆ 5,000 ರೂ. ನೋಂದಣಿ ಮಾಡದೆ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕೆ 5,000 ರೂ., ಇನ್ಶುರೆನ್ಸ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕೆ 2,000 ರೂ. ಒಟ್ಟು 47,500 ರೂ. ದಂಡವನ್ನು ವಿಧಿಸಲಾಗಿದೆ.
ಮದ್ಯ ಸೇವಿಸಿರುವುದಾಗಿ ಒಪ್ಪಿಕೊಂಡ ಆಟೋ ಚಾಲಕ ಹರಿಬಂಧು ಕನ್ಹಾರ್ ಈ ಕುರಿತು ಪ್ರತಿಕ್ರಿಯಿಸಿದ್ದು, ನನಗೆ ಅಷ್ಟು ದೊಡ್ಡ ಪ್ರಮಾಣದ ದಂಡವನ್ನು ಪಾವತಿಸಲು ಸಾಧ್ಯವಿಲ್ಲ. ಅವರು ನನ್ನ ವಾಹನವನ್ನು ವಶಪಡಿಸಿಕೊಳ್ಳಲಿ ಅಥವಾ ಜೈಲಿಗೆ ಕಳುಹಿಸಲಿ, ನಾನು ಅಷ್ಟು ಮೊತ್ತವನ್ನು ಪಾವತಿಸಲು ಸಾಧ್ಯವಿಲ್ಲ. ಅಲ್ಲದೆ, ಎಲ್ಲ ದಾಖಲೆಗಳು ನನ್ನ ಮನೆಯಲ್ಲಿವೆ ಎಂದು ತಿಳಿಸಿದ್ದಾರೆ. ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸೆಪ್ಟೆಂಬರ್ 1ರಿಂದ ಜಾರಿಯಾಗಿರುವ ಹೊಸ ಸಂಚಾರಿ ನಿಯಮಗಳ ನಿಬಂಧನೆ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟು 47,500 ರೂ. ದಂಡವನ್ನು ಚಂದ್ರಶೇಖರಪುರದ ಚಾಲನಾ ಪರೀಕ್ಷಾ ಕೇಂದ್ರದಲ್ಲಿ ಪಾವತಿಸುವಂತೆ ಆಟೋ ಚಾಲಕನಿಗೆ ಸೂಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು