ಸುದ್ದಿ

ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

46

ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.

ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.

ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.

ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…