ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.

ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ 5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ವರ್ಷಕ್ಕೆ 16 ಸಾವಿರ ಹಣವನ್ನು ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .

ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.

ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು ಇದೇ ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ ದೇಶದ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…