ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

ವ್ಯಕ್ತಿಯೊಬ್ಬ ಆಲೂಗಡ್ಡೆ ಮತ್ತು ಈರುಳ್ಳಿ ಬಳಸಿ ಟೇಬಲ್ ಫ್ಯಾನ್ ತಿರುಗಿಸುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆತ ಬಿ.ಟೆಕ್, ಎಂ.ಟೆಕ್, ಐಐಟಿ ಕಲಿತ ವ್ಯಕ್ತಿಯಲ್ಲ. ಲುಂಗಿ ಧರಿಸಿದ ಸಾದಾ ವ್ಯಕ್ತಿ ಇಂಥದ್ದೊಂದು ಚಮತ್ಕಾರ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.

ವೈರಲ್ ಆಗಿರುವ ವಿಡಿಯೋದ ಪ್ರಕಾರ, ಆತ ಟೇಬಲ್ ಫ್ಯಾನಿನ ವೈರ್ ಅನ್ನು ಸ್ವಿಚ್ ಬೋರ್ಡಿಗೆ ಹಾಕುವ ಬದಲು ಎರಡು ಆಲೂಗಡ್ಡೆ ಮತ್ತು ಒಂದು ಈರುಳ್ಳಿಯನ್ನು ಎರಡು ಸರಳಿಗೆ ಸುರಿದು ಅದನ್ನು ನೆಲದಲ್ಲಿ ಹುಗಿಯುತ್ತಾನೆ.ಬಳಿಕ ಅದಕ್ಕೆ ಫ್ಯಾನಿನ ವೈರ್ ಸಂಪರ್ಕಿಸುತ್ತಾನೆ. ತಕ್ಷಣವೇ ಫ್ಯಾನ್ವೇಗವಾಗಿ ತಿರುಗಲು ಆರಂಭವಾಗುತ್ತದೆ. ಇದನ್ನು ನೋಡಿ ಜನರೆಲ್ಲಾ ಅಚ್ಚರಿಗೆ ಒಳಗಾಗಿದ್ದಾರೆ.

ವಿದ್ಯುತ್ ಉತ್ಪಾದನೆ ಮಾಡುವುದು ಇಷ್ಟೊಂದು ಸುಲಭವೇ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಈ ಕುರಿತು ಎಲೆಕ್ಟ್ರಾನಿಕ್ ತಜ್ಞರನ್ನು ಕೇಳಿದಾಗ ಇಂಥದ್ದೊಂದು ಸಾಧ್ಯತೆಯನ್ನು ಅವರು ನಿರಾಕರಿಸಿದ್ದಾರೆ.

ಆಲೂಡ್ಡೆ ಮತ್ತು ಈರುಳ್ಳಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಅಂಶ ಮತ್ತು ರಾಸಾಯನಿಕಗಳು ಇರುತ್ತವೆ. ಅವು ವಿದ್ಯುತ್ ಪ್ರವಹಿಸಲು ನೆರವು ನೀಡುತ್ತವೆ. ಆದರೆ, ಅವುಗಳಿಂದಲೇ ವಿದ್ಯುತ್ ಉತ್ಪಾದನೆ ಆಗುವುದಿಲ್ಲ.

ಆ ಫ್ಯಾನಿಗೆ ಯಾವುದೋ ಬ್ಯಾಟರಿ ಅಳವಡಿಸಿರಬಹುದು, ಇಲ್ಲವೇ ಇನ್ನಾವುದೋ ತಂತ್ರಜ್ಞಾನ ಬಳಸಿರಬಹುದು ಎಂದು ಹೇಳಿದ್ದಾರೆ.
ವಿಡಿಯೋ ನೋಡಲು ಕ್ಲಿಕ್ ಮಾಡಿ:-https://youtu.be/dUhtYIlJ0ys
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ