ಸುದ್ದಿ

ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

43

ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ.

ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಸಾಮೂಹಿಕ ವಿವಾಹ ನೆರವೇರಿಸಿದ್ದಾರೆ. ಈ ಕಲ್ಯಾಣೋತ್ಸವದಲ್ಲಿ 32 ನವಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.

ಈ ವಿವಾಹ ಮಹೋತ್ಸವದಲ್ಲಿ ಅಂತರ್‌ಧರ್ಮ ವಿವಾಹವಾದ ಹಿಂದೂ ಹಾಗೂ ಇಸ್ಲಾಂ ಧರ್ಮದ ಒಂದು ಜೋಡಿಯು ಎಲ್ಲರ ಗಮನ ಸೆಳೆಯಿತು. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಅಂತರ್ ಧರ್ಮ ವಿವಾಹದ ಮೂಲಕ ನವಜೀವನಕ್ಕೆ ಪಾದಾರ್ಪಣೆ ಮಾಡಿದ ಹಸೀನ ಕೂಡ ತಮ್ಮ ಜೀವನಕ್ಕೆ ಬಸವತತ್ವವನ್ನು ಅಳವಡಿಸಿಕೊಂಡಿದ್ದಾರೆ.

ಸಮಾಜ ಪರಿವರ್ತನೆಗಾಗಿ ಅಂತರ್ಜಾತಿ ಹಾಗೂ ಅಂತರ್‌ಧರ್ಮ ವಿವಾಹಗಳಿಂದಾದರೂ ಈ ಮೌಢ್ಯ ನಿಷೇಧವಾಗಬೇಕೆಂದು ನೂತನ ವಧು ಹಸೀನ ಹೇಳಿದ್ದಾರೆ.ಮುರುಘಾ ಮಠದಲ್ಲಿ ನಡೆದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವ ಜಾತಿ ಧರ್ಮಗಳನ್ನು ಮೀರಿ ನಿಂತಿದೆ. ಆಷಾಢ ಶುಕ್ರವಾರ ಅನ್ನೋದನ್ನೂ ಲೆಕ್ಕಿಸದೇ 32 ನವಜೋಡಿಗಳು ನವಜೀವನಕ್ಕೆ ಕಾಲಿಡುವ ಮೂಲಕ ಮೌಢ್ಯ ನಿಷೇಧಕ್ಕೆ ಪ್ರೇರಣೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ವಿಚಿತ್ರ ಆದರೂ ಸತ್ಯ

    ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

    ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!