ಆರೋಗ್ಯ, ಸರ್ಕಾರಿ ಯೋಜನೆಗಳು

ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

129

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ