ಸುದ್ದಿ

ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

37

ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ.

ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಒಂದು ವೇಳೆ ಹಣಕಾಸು ಇಲಾಖೆಯ ನಿರ್ಧಾರಕ್ಕೆ ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದರೆ ಆಗ ಇಂದಿರಾ ಕ್ಯಾಂಟೀನ್ ಪಾಲಿಕೆಗೆ ದೊಡ್ಡ ಹೊರೆಯಾಗಲಿದೆ. ಆಗ ಪಾಲಿಕೆ ತನ್ನ ವಾರ್ಷಿಕ ಆದಾಯದಲ್ಲಿ ಕನಿಷ್ಠ 100 ಕೋಟಿ ಕ್ಯಾಂಟೀನ್ ನಿರ್ವಹಣೆಗೆ ಮೀಸಲಿಡಬೇಕಾದ ಅಗತ್ಯಬೀಳಲಿದೆ.

2019-20ನೇ ಸಾಲಿಗೆ 210 ಕೋಟಿ ನೀಡುವಂತೆ ಬಿಬಿಎಂಪಿಯು ಸರ್ಕಾರಕ್ಕೆ ಈ ಹಿಂದೆ ಮೂರು ಬಾರಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ನಿರ್ವಹಣೆಯ ಒಟ್ಟಾರೆ ವೆಚ್ಚದಲ್ಲಿ ಶೇ.50ರಷ್ಟು ಹಣವನ್ನಾದರೂ ನೀಡುವಂತೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಉತ್ತರಿಸಿರುವ ಹಣಕಾಸು ಇಲಾಖೆ ಯೋಜನೆಗೆ ಶೇ.25 ಹಣವನ್ನು ಮಾತ್ರ ನೀಡಬಹುದು ಎಂಬ ಅಭಿಪ್ರಾಯ ತಿಳಿಸಿದೆ. ಪ್ರಸ್ತತ ಈ ಸಂಬಂಧಿ ಕಡತ ಮುಖ್ಯಮಂತ್ರಿಯವರ ಒಪ್ಪಿಗೆಗೆ  ಸಿಎಂ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…