ಸುದ್ದಿ

ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

32

ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ.

ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಒಂದು ವೇಳೆ ಹಣಕಾಸು ಇಲಾಖೆಯ ನಿರ್ಧಾರಕ್ಕೆ ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದರೆ ಆಗ ಇಂದಿರಾ ಕ್ಯಾಂಟೀನ್ ಪಾಲಿಕೆಗೆ ದೊಡ್ಡ ಹೊರೆಯಾಗಲಿದೆ. ಆಗ ಪಾಲಿಕೆ ತನ್ನ ವಾರ್ಷಿಕ ಆದಾಯದಲ್ಲಿ ಕನಿಷ್ಠ 100 ಕೋಟಿ ಕ್ಯಾಂಟೀನ್ ನಿರ್ವಹಣೆಗೆ ಮೀಸಲಿಡಬೇಕಾದ ಅಗತ್ಯಬೀಳಲಿದೆ.

2019-20ನೇ ಸಾಲಿಗೆ 210 ಕೋಟಿ ನೀಡುವಂತೆ ಬಿಬಿಎಂಪಿಯು ಸರ್ಕಾರಕ್ಕೆ ಈ ಹಿಂದೆ ಮೂರು ಬಾರಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ನಿರ್ವಹಣೆಯ ಒಟ್ಟಾರೆ ವೆಚ್ಚದಲ್ಲಿ ಶೇ.50ರಷ್ಟು ಹಣವನ್ನಾದರೂ ನೀಡುವಂತೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಉತ್ತರಿಸಿರುವ ಹಣಕಾಸು ಇಲಾಖೆ ಯೋಜನೆಗೆ ಶೇ.25 ಹಣವನ್ನು ಮಾತ್ರ ನೀಡಬಹುದು ಎಂಬ ಅಭಿಪ್ರಾಯ ತಿಳಿಸಿದೆ. ಪ್ರಸ್ತತ ಈ ಸಂಬಂಧಿ ಕಡತ ಮುಖ್ಯಮಂತ್ರಿಯವರ ಒಪ್ಪಿಗೆಗೆ  ಸಿಎಂ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…