ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.
ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.
ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.
ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..