ಸುದ್ದಿ

ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

221

ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ.

ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ ಈ ರೀತಿ ಆಗುತ್ತದೆ ಎಂದು ಯಾರು ಯೋಚಿಸಲು ಸಾಧ್ಯವಿರಲಿಲ್ಲ.

ನಾನು ಒಬ್ಬ ಮಗನನ್ನು ಕಳೆದುಕೊಂಡಿದ್ದೇನೆ, ನನಗೆ ಇನ್ನೊಬ್ಬ ಮಗನಿದ್ದು ಆತನನ್ನು ಭಾರತ ಮಾತೆಯ ಸೇವೆಗಾಗಿ ಮುಡಿಪಿಡುವೆ, ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಿಹಾರ ಮೂಲದ ಹುತಾತ್ಮ ಯೋಧ ರತನ್ ಠಾಕೂರ್ ತಂದೆ ಹೇಳಿದ್ದಾರೆ.

ರತನ್ ಠಾಕೂರ್ ಅವರು ಮೂಲತಃ ಬಿಹಾರದ ಭಾಗಲ್‍ಪುರದವರು. ಮಗನನ್ನು ಕಳೆದುಕೊಂಡು ನೋವಿನಲ್ಲಿರುವ ತಂದೆ, ದೇಶಕ್ಕಾಗಿ ಓರ್ವ ಮಗನನ್ನು ಅರ್ಪಿಸಿದ್ದೇನೆ. ಈಗ ಇರುವ ಇನ್ನೊಬ್ಬ ಮಗನನ್ನೂ ಉಗ್ರರ ವಿರುದ್ಧ ಹೋರಾಡಲು ಕಳುಹಿಸಲು ಸಿದ್ಧನಿದ್ದೇನೆ. ಯೋಧರನ್ನು ಬಲಿಪಡೆದಿರುವ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇಬೇಕು ಎಂದು ಠಾಕೂರ್ ಅವರ ತಂದೆ ಕಣ್ಣೀರಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…