ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ನಡುವೆ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಖಡಕ್ ವಾರ್ನಿಂಗ್ ನೀಡಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ವೈದ್ಯರು ಇಂದಿನಿಂದ ಎಂದಿನಂತೆ ಕೆಲಸ ಮಾಡಲು ಮುಂದಾಗಿದ್ದಾರೆ.

ಈ ನಡುವೆ ಖಾಸಗಿ ವೈದ್ಯರು ಮಸೂದೆಯನ್ನು ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೇಳೆಯಲ್ಲಿ ಅತ್ತ ಸಕ್ಕರೆ ನಾಡು ಮಂಡ್ಯದ ವೈದ್ಯರೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅವರ ಹೆಸರು ಡಾ ಶಂಕರೇಗೌಡ. ನವೆಂಬರ್ 3ರಂದು ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ನೀಡಿದ್ದ ಕರೆಗೂ ಬೆಂಬಲ ನೀಡದೇ ಕರ್ತವ್ಯ ನಿರ್ವಹಿಸಿದ್ದರು.

ಕೆ.ಪಿ.ಎಂ.ಈ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಯಾವುದೇ ಬೆಂಬಲ ನೀಡದೆ ತಮ್ಮ ಪಾಡಿಗೆ ತಮ್ಮ ಕೆಲಸವನ್ನು ಮಾಡುತ್ತ, ರೋಗಿಗಳ ಸೇವೆಯಲ್ಲಿ ತಮ್ಮನು ತೊಡಗಿಸಿಕೊಂಡಿದ್ದರು. ಡಾ.ಶಂಕರೇಗೌಡ. ಚರ್ಮ ರೋಗದ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದವರು.

ಶಿವಳ್ಳಿ ಗ್ರಾಮದವರಾದ ಇವರು ಬೆಳಿಗ್ಗೆ ತಮ್ಮ ಗ್ರಾಮದಲ್ಲಿ ಮತ್ತು ಮಧ್ಯಾಹ್ನ ಮಂಡ್ಯದ ತಮ್ಮ ಚಿಕಿತ್ಸಾಲಯದಲ್ಲಿ ರೋಗಿಗಳಿಗೆ ಕೇವಲ 5 ರೂ ಪಡೆದು ಚಿಕಿತ್ಸೆ ನೀಡುತ್ತಾರೆ. ಎಷ್ಟೋ ಬಾರಿ 5 ರೂ ಗಳನ್ನು ಸಹ ಪಡೆಯುವುದಿಲ್ಲ. ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದ ಶಂಕರೇ ಗೌಡರು ತಮ್ಮ 6 ಎಕರೆ ಭೂಮಿಯಲ್ಲಿ ಕೃಷಿ ಕೆಲಸದಲ್ಲೂ ತೊಡಗಿದ್ದಾರೆ , ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ.

ತಮ್ಮ ವೃತ್ತಿ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಶಂಕರೇ ಗೌಡರು ನಾನು ಹಣ ಮಾಡುವುದಕ್ಕೆ ಈ ವೃತ್ತಿಯನ್ನು ಆಯ್ದುಕೊಂಡಿಲ್ಲ, ಜನರ ಸೇವೆಯೇ ನನ್ನ ಉದ್ದೇಶ ಅಂತ ಹೇಳುತ್ತಾರೆ. ಇದೇ ವೇಳೆ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆ ಬಗ್ಗೆ ಕೂಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕಾಯಿದೆ ಬಹಳ ಕಾಲದ ಹಿಂದೆ ಜಾರಿಗೆ ಬರಬೇಕಾಗಿತ್ತು, ಆದರೆ ತಡವಾಗಿ ಈ ಕಾಯ್ದೆ ಜಾರಿಗೆ ಬರಲು ಸಿದ್ದವಾಗಿರುವುದು ಖುಷಿಯ ವಿಚಾರ ಅಂತ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…